ಮೊದಲ ಬಾರಿಗೆ ಮನಸ್ಸಿನ ಮಾತು ಹಂಚಿಕೊಂಡ ನಟಿ ಸಮಾಂತ.! Actress Samantha pours her heart out for the first time.!

0


ಹೈದರಾಬಾದ್ : ಹೆಸರಾಂತ ಟಾಲಿವುಡ್ ನಟಿ ಸಮಂತಾ ರುತ್ ಪ್ರಭು ಅವರು ನಾಗಚೈತನ್ಯ ಅವರಿಂದ ವಿಚ್ಛೇದನ ಪಡೆದದ್ದು ಎಲ್ಲರಿಗೂ ತಿಳಿದ ವಿಚಾರ. ಆದರೆ ಕೆಲವು ಸಮಯದ ನಂತರ ಈ ವಿಚಾರದ ಕುರಿತಾಗಿ ಸಮಂತಾ ಮೊದಲಬಾರಿಗೆ ಮನಸ್ಸಿನ ಮಾತನ್ನು ಹಂಚಿಕೊಂಡಿದ್ದಾರೆ.

 

“ವಿಚ್ಛೇದನದ ಬಳಿಕ ಕುಗ್ಗಿಹೋಗಿ, ಸಾಯುವ ಹಂತ ತಲುಪುತ್ತೇನೆ ಎಂದುಕೊಂಡಿದ್ದೆ” ಎಂದು ಸಮಂತಾ ಹೇಳಿದ್ದಾರೆ.

 

ಫಿಲ್ಮ್ ಫೇರ್ ಸಂದರ್ಶನವೊಂದರಲ್ಲಿ ಸಮಂತಾ ನಾಗಚೈತನ್ಯರೊಂದಿಗೆ ಬೇರೆಯಾಗಿದ್ದರ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ.”ಜೀವನದಲ್ಲಿ ಕಷ್ಟದ ದಿನಗಳು ಬರುವುದು ಸಾಮಾನ್ಯ. ಅದನ್ನು ನಾವು ಧೈರ್ಯದಿಂದ ಎದುರಿಸಬೇಕು. ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ಅದನ್ನು ಒಪ್ಪಿಕೊಳ್ಳುವ ಮನಸ್ಥಿತಿ ನಮಗೆ ಇರಬೇಕಾಗುತ್ತೆ. ನಾನು ನನ್ನನ್ನು ತುಂಬಾ ದುರ್ಬಲ ವ್ಯಕ್ತಿ ಎಂದು ಭಾವಿಸಿದ್ದೆ, ವಿಚ್ಛೇದನದ ಬಳಿಕ ಕುಗ್ಗಿಹೋಗಿ, ಸಾಯುವ ಹಂತ ತಲುಪುತ್ತೇನೆ ಎಂದುಕೊಂಡಿದ್ದೆ. ಆದರೆ ನನ್ನನ್ನು ನಾನು ಸಮರ್ಥವಾಗಿ
ನಿಭಾಯಿಸಿಕೊಂಡಿದ್ದೇನೆ. ನನ್ನ ಮನಸ್ಥಿತಿ ಇಷ್ಟು ಬಲವಾಗಿದೆ ಎಂದು ಭಾವಿಸಿರಲಿಲ್ಲ. ನನ್ನ ಬಗ್ಗೆ ನನಗೆ ಹೆಮ್ಮೆ ಇದೆ. ಇನ್ನು ಜೀವನದಲ್ಲಿ ಬಹಳ ಮುಂದೆ ಸಾಗಬೇಕಿದೆ” ಎಂದು ತಮ್ಮ ಮನದ ಮಾತನ್ನು ಹೇಳಿದ್ದಾರೆ.

 

ಅಂದು ಸಾಮಾಜಿಕ ಜಾಲತಾಣಗಳ ಖಾತೆಯಲ್ಲಿ ಸಮಂತಾ ಹೆಸರಿನ ಜೊತೆಗೆ ಇರುವ ಅಕ್ಕಿನೇನಿ ಎಂದು ಇರುವುದುನ್ನು ತೆಗೆದ ಬೆನ್ನಲ್ಲೆ ಹಲವು ವಿವಾದಗಳು ಸೃಷ್ಟಿಯಾಗಿದ್ದವು. ಸಮಂತಾ ದಾಂಪತ್ಯದಲ್ಲಿ ಬಿರುಕು ಮೂಡಿದೆ ಎಂಬ ಸುದ್ದಿ ಹರಿದಾಡುತ್ತಿತ್ತು. ಈ ವದಂತಿಗಳು ಹರಿದಾಡುತಿದ್ದ ನಡುವೆಯೇ ಸಾಮಾಜಿಕ ಜಾಲತಾಣದಲ್ಲಿ ವಿಚ್ಛೇದನದ ಕುರಿತು ಘೋಷಿಸಿದ್ದರು.

 

ನಂತರ ಸಮಂತಾ, ನಾಗಚೈತನ್ಯ ಇಬ್ಬರು ವಿಚ್ಛೇದನದ ಕುರಿತಾಗಿ ಯಾವುದೇ ಹೇಳಿಕೆ ನೀಡಿರಲಿಲ್ಲ. ಆದರೆ ಇದೇ ಮೊದಲ ಬಾರಿಗೆ ಸಮಂತಾ ಮಾತನಾಡಿದ್ದಾರೆ. ಸಮಂತಾ ವಿಚ್ಛೇದದನದ ನಂತರ ಹಲವು ಸಿನಿಮಾಗಳಲ್ಲಿ ನಟಿಸುವ ಅವಕಾಶವನ್ನು ಗಿಟ್ಟಿಸಿಕೊಂಡಿದ್ದಾರೆ.

 

ಈಗ ನಟಿ ಸಮಂತಾಗೆ ಹಾಲಿವುಡ್ ಮತ್ತು ಬಾಲಿವುಡ್ ಚಿತ್ರರಂಗದಲ್ಲಿ ಅವಕಾಶಗಳು ಬರುತ್ತಿದೆ. ಹಾಲಿವುಡ್ ನ ಒಂದು ಚಿತ್ರದಲ್ಲಿ ಸಮಂತಾ ನಟಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here