ಆಗಸ್ಟ್ 25: ಮುಂದಿನ ವರ್ಷ ತಮಿಳುನಾಡಿನಲ್ಲಿ ನಡೆಯಲಿರುವ ನಿರ್ಣಾಯಕ ವಿಧಾನಸಭಾ ಚುನಾವಣೆಗೆ ಕೇಸರಿ ಪಕ್ಷವು ಸ್ಪರ್ದಿಸುವುದರಿಂದ ಕರ್ನಾಟಕದ ‘ಸಿಂಘಮ್’ ಮಾಜಿ ಐಪಿಎಸ್ ಅಧಿಕಾರಿ ಕೆ ಅಣ್ಣಾಮಲೈ ಇಂದು ಬಿಜೆಪಿಗೆ ಸೇರಲಿದ್ದಾರೆ.
39 ವರ್ಷದ ಮಾಜಿ ಐಪಿಎಸ್ ಅಧಿಕಾರಿ ನವದೆಹಲಿಯಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಅಧ್ಯಕ್ಷ ಜೆ ಪಿ ನಡ್ಡಾ ಅವರ ಸಮ್ಮುಖದಲ್ಲಿ ಬಿಜೆಪಿ ಸೇರಿಕೊಳ್ಳಲಿದ್ದಾರೆ.