ವಾಹನ ಮತ್ತು ಬೈಕ್ ನಡುವೆ ಅಪಘಾತ : ಮಹಿಳೆ ಮೃತ್ಯು..!

0


ಉಪ್ಪಿನಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪ  ಸಿಮೆಂಟ್ ಮಿಕ್ಸರ್ ವಾಹನ ಮತ್ತು ಬೈಕ್ ನಡುವಿನ ರಸ್ತೆ ಅಪಘಾತದಲ್ಲಿ ಬೈಕ್ ಸಹ ಸವಾರೆ ಮಹಿಳೆ ಮೃತಪಟ್ಟ ಘಟನೆ  ಶುಕ್ರವಾರ ರಾಷ್ಟ್ರೀಯ ಹೆದ್ದಾರಿ 75ರ ಉಪ್ಪಿನಂಗಡಿಯಲ್ಲಿ ನಡೆದಿದೆ.

ಮೃತಪಟ್ಟ ಮಹಿಳೆಯನ್ನು ಸರಳಿಕಟ್ಟೆ ನಿವಾಸಿ ಸಖಿನಾ ಎಂದು ಗುರುತಿಸಲಾಗಿದೆ. ಇವರ ಪತಿ ರಫೀಕ್ ಅವರಿಗೂ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.

ಉಪ್ಪಿನಂಗಡಿಯ ಆದಿತ್ಯ ಹೋಟೆಲ್ ಬಳಿ ಘಟನೆ ನಡೆದಿದೆ. ಸಿಮೆಂಟ್ ಮಿಕ್ಸರ್ ವಾಹನವು ಬಿ.ಸಿ.ರೋಡ್ ನಿಂದ ಉದನೆ ಕಡೆಗೆ ಹೋಗುತ್ತಿತ್ತು. ಈ ವೇಳೆ ಢಿಕ್ಕಿ ಸಂಭವಿಸಿದೆ.

ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ.

See also  ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 100% ಅಂಕ ಗಳಿಸಿದ ಆರು ವಿದ್ಯಾರ್ಥಿಗಳಲ್ಲಿ ದಕ್ಷಿಣ ಕನ್ನಡದ ಅನುಷ್ ಎ

LEAVE A REPLY

Please enter your comment!
Please enter your name here