ಪ್ರಧಾನಿ ಮೋದಿ 70ನೇ ಜನ್ಮ ದಿನಾಚರಣೆ ಪ್ರಯುಕ್ತ ಜಿಲ್ಲಾ ಬಿಜೆಪಿ ವತಿಯಿಂದ ಸಾಮೂಹಿಕ ಪ್ರಾರ್ಥನೆ ಮತ್ತು ವಿಶೇಷ ಪೂಜೆ

0
modi birthday celebration

ವಿಶ್ವ ನಾಯಕ, ದೇಶದ ಹೆಮ್ಮೆಯ ಪ್ರಧಾನಿ ಸನ್ಮಾನ್ಯ ನರೇಂದ್ರ ಮೋದಿಯವರ 70ನೇ ಜನ್ಮ ದಿನಾಚರಣೆ ಪ್ರಯುಕ್ತ ದೇಶದ ಸಮೃದ್ಧಿ ಹಾಗೂ ಪ್ರಧಾನಿ ಮೋದಿ ಯವರ ದೀರ್ಘಾಯುಷ್ಯ, ಆರೋಗ್ಯ ಮತ್ತು ಯಶಸ್ಸಿಗಾಗಿ ಸೆ.17ರಂದು ಸಂಜೆ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದಲ್ಲಿ ಉಡುಪಿಯ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಹಾಗೂ ವಿಶೇಷ ಪೂಜೆ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಪೂರ್ಣಿಮಾ ಸುರೇಶ್ ನಾಯಕ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಬಿ.ರವಿ ಅಮೀನ್, ಯಶ್ಪಾ ಲ್ ಎ.ಸುವರ್ಣ, ಜಿಲ್ಲಾ ಕೋಶಾಧಿಕಾರಿ, ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ಉಡುಪಿ ನಗರ ಅಧ್ಯಕ್ಷ ಮಹೇಶ್ ಠಾಕೂರ್.

ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾ ಸಹವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಕಛೇರಿ ಕಾರ್ಯದರ್ಶಿ ಸತ್ಯಾನಂದ ನಾಯಕ್ ಆತ್ರಾಡಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಉಪಾಧ್ಯಕ್ಷೆ ರಮಾ ಶೆಟ್ಟಿ, ಪ್ರ.ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ಬಿಜೆಪಿ ಮುಖಂಡ ಅಂಡಾರು ದೇವಿಪ್ರಸಾದ್ ಶೆಟ್ಟಿ, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ಜಗದೀಶ್ ಆಚಾರ್ಯ ಕಪ್ಪೆಟ್ಟು, ಉಡುಪಿ ನಗರ ಪ್ರ.ಕಾರ್ಯದರ್ಶಿ ಮಂಜುನಾಥ್ ಮಣಿಪಾಲ್, ನಗರ ಕಾರ್ಯದರ್ಶಿ ದಾಯಾಶಿನಿ ಪಾಂಡುರಂಗ, ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಸರೋಜಾ ಶೆಟ್ಟಿಗಾರ್, ಕರ್ನಾಟಕ ರಾಜ್ಯ ತುಳು ಸಾಹಿತ್ಯ ಅಕಾಡೆಮಿ ಸದಸ್ಯೆ ತಾರಾ ಆಚಾರ್ಯ, ಉಡುಪಿ ನಗರ ಮಹಿಳಾ ಮೋರ್ಚಾ ಪದಾಧಿಕಾರಿಗಳಾದ ಲೈಲಾ ನಿಟ್ಟೂರು, ಸರೋಜ ರಮೇಶ್ ಶೆಣೈ, ಶೈಲಜಾ ಮಲ್ಪೆ, ಲಕ್ಷ್ಮಿ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.


 

See also  ಕೊಟೆರಾಯನ ಬೆಟ್ಟಾದಲ್ಲಿ ಭೂಕುಸಿತ

LEAVE A REPLY

Please enter your comment!
Please enter your name here