ಎಕ್ಕೂರು ಬಾಬಾ ಅಲಿಯಾಸ್ ಶುಭಾಕರ್ ಶೆಟ್ಟಿ ಇನ್ನಿಲ್ಲ!

0

ಮಂಗಳೂರು : 30 ವರ್ಷಗಳ ಹಿಂದೆ ಕರಾವಳಿಯಲ್ಲಿ ತನ್ನದೇ ಆದ ಗ್ಯಾಂಗ್ ಕಟ್ಟಿಕೊಂಡು ಸದ್ದು ಮಾಡಿದ್ದ ಎಕ್ಕೂರು ಬಾಬಾ ಅಲಿಯಾಸ್ ಶುಭಕರ ಶೆಟ್ಟಿ (61) ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಲಿವರ್ ಕಾಯಿಲೆಯಿಂದ ಬಳಲುತ್ತಿದ್ದ ಶುಭಕರ ಶೆಟ್ಟಿ ನಿನ್ನೆ ರಾತ್ರಿ ಉಸಿರಾಟದ ಸಮಸ್ಯೆಗೆ ಒಳಗಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಉಸಿರಾಟದ ಸಮಸ್ಯೆ ಬಿಗಡಾಯಿಸಿದ ಹಿನ್ನೆಲೆ ಅವರಿಗೆ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿತ್ತು. ಇಂದು ಅವರಿಗೆ ಕೊರೊನಾ ಪಾಸಿಟಿವ್ ಆಗಿರುವುದು ದೃಢಪಟ್ಟಿತ್ತು. ಈ ನಡುವೆ, ಹೃದಯಾಘಾತಕ್ಕೆ ಒಳಗಾಗಿದ್ದ ಶುಭಕರ ಶೆಟ್ಟಿ ಸಂಜೆ ಹೊತ್ತಿಗೆ ಮೃತಪಟ್ಟಿದ್ದಾಗಿ ಆಸ್ಪತ್ರೆಯಲ್ಲಿ ತಿಳಿದು ಬಂದಿದೆ.

ಮುಡಿಪುವಿನ ಪೃಥ್ವಿಪಾಲ್ ರೈ ಕೊಲೆ ಪ್ರಕರಣ ಸೇರಿದಂತೆ ಕೊಲೆ, ಕೊಲೆಯತ್ನ, ಹಫ್ತಾ ವಸೂಲಿ ಸೇರಿದಂತೆ ಹಲವು ಪ್ರಕರಣಗಳನ್ನು ಎದುರಿಸುತ್ತಿದ್ದ ಎಕ್ಕೂರು ಬಾಬಾ ಕಳೆದ ಹತ್ತು ವರ್ಷಗಳಲ್ಲಿ ರೌಡಿಸಂನಿಂದ ದೂರವಿದ್ದು ಟ್ಯಾಂಕರ್, ಕಲ್ಲಿನ ಕೋರೆ ಹೀಗೆ ಇತರೇ ವಹಿವಾಟಿನಲ್ಲಿ ತೊಡಗಿಸಿಕೊಂಡಿದ್ದರು ಎನ್ನಲಾಗಿದೆ.

ಕಳೆದ 15 ವರ್ಷಗಳಲ್ಲಿ ಯುವಸೇನೆಯಲ್ಲಿ ಗುರುತಿಸಿಕೊಂಡಿದ್ದ ಎಕ್ಕೂರು ಬಾಬಾ, ಮಂಗಳೂರಿನ ನೆಹರು ಮೈದಾನದ ಗಣೇಶೋತ್ಸವ ಮೆರವಣಿಗೆಯಲ್ಲಿ ಮುಂಚೂಣಿಯಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಉಳಿದಂತೆ ಹೊರಗೆ ಕಾಣಿಸಿಕೊಳ್ಳುವುದು ಕಡಿಮೆಯಾಗಿತ್ತು. ಅಪರೂಪಕ್ಕೆ ಮಾತ್ರ ಮನೆಯಿಂದ ಹೊರಗೆ ಬರುತ್ತಿದ್ದರು.ಜೊತೆಗಿದ್ದ ಹುಡುಗರೂ ತಮ್ಮ ತಮ್ಮ ಚಟುವಟಿಕೆಯಲ್ಲಿ ಬಿಝಿಯಾಗಿದ್ದು ಮತ್ತು ಪೊಲೀಸರು ರೌಡಿಗಳ ಹೆಡೆಮುರಿ ಕಟ್ಟಲು ಶುರು ಮಾಡಿದ್ದು ಎಕ್ಕೂರು ಗ್ಯಾಂಗ್ ಬಲ ಕಳಕೊಳ್ಳುವಂತಾಗಿತ್ತು.ನಂತರ ಸಮಾಜ ಸೇವೆಯಲ್ಲಿ ತೊಡಗಿದ್ದರು.


 

See also  ಹಾಕಿ ದಂತಕಥೆ ಮೇಜರ್ ಧ್ಯಾನ್ ಚಂದ್ ಅವರ ಜನ್ಮದಿನ !

LEAVE A REPLY

Please enter your comment!
Please enter your name here