ಕೋರ್ಟ್ ಮೆಟ್ಟಿಲೇರಿದ ‘ಗರುಡ ಗಮನ ವೃಷಭ ವಾಹನ’ ಚಿತ್ರದ ವಿವಾದ..! Garuda Gamana Vrishabha Vahana in legal trouble..!

0


ಚಾಮರಾಜನಗರ: ‘ಗರುಡ ಗಮನ ವೃಷಭ ವಾಹನ’ ಚಿತ್ರದ ವಿವಾದವು ಇಂದು ಕೋರ್ಟ್ ಮೆಟ್ಟಿಲೇರಿದೆ.

 

‘ಗರುಡ ಗಮನ ವೃಷಭ ವಾಹನ’ ಚಿತ್ರದಲ್ಲಿ ಕ್ರೌರ್ಯ ಮೆರೆಯುವ ದೃಶ್ಯವಿದ್ದು, ಅದಕ್ಕೆ ಮಹದೇಶ್ವರನ `ಸೋಜುಗಾದ ಸೂಜುಮಲ್ಲಿಗೆ’ ಜನಪದ ಹಾಡು ಬಳಕೆ ಮಾಡಲಾಗಿತ್ತು. ಈ ಹಿನ್ನೆಲೆ ಚಿತ್ರದ ವಿರುದ್ಧ ಸುವರ್ಣ ಕರ್ನಾಟಕ ವೀರಶೈವ ಲಿಂಗಾಯತ ಮಹಾಸಭಾ ರಾಜ್ಯಾಧ್ಯಕ್ಷ ವಿಜಯ್‍ಕುಮಾರ್ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ನಲ್ಲಿ ಮೊಕದ್ದಮೆ ದಾಖಲಿಸಿದ್ದರು.

 

ವಿಜಯ್‍ಕುಮಾರ್ ಅವರ ಈ ಅರ್ಜಿಯಲ್ಲಿ, ಚಿತ್ರದಲ್ಲಿ ಮಹದೇಶ್ವರನ ಹಾಡು ತೆಗೆಯಬೇಕು ಇಲ್ಲವೇ, ಮ್ಯೂಟ್ ಮಾಡಬೇಕು ಎಂದು ಸೂಚಿಸಲಾಗಿದೆ. ಅದು ಅಲ್ಲದೇ ಅವರು ಚಿತ್ರದ ನಿರ್ದೇಶಕ ರಾಜ್ ಬಿ.ಶೆಟ್ಟಿ, ನಟ ರಿಷಬ್ ಶೆಟ್ಟಿ, ನಿರ್ಮಾಪಕರಾದ ರವಿ ರೈ.ಬಿ.ವಿ, ವಚನಶೆಟ್ಟಿ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here