ದೋಣಿ ದುರಂತ: ಮೃತರ ಕುಟುಂಬಗಳಿಗೆ ತಲಾ 6 ಲಕ್ಷ ರೂ ಪರಿಹಾರ.

0


ಬೈಂದೂರು: ಆಗಸ್ಟ್ 16ರಂದುಕೊಡೇರಿಯಲ್ಲಿ ಸಂಭವಿಸಿದ ನಾಡ ದೋಣಿ ದುರಂತದಲ್ಲಿ ಮೃತ ಪಟ್ಟ ನಾಲ್ವರು ಮೀನುಗಾರರಾದ ಲಕ್ಷ್ಮಣ ಖಾರ್ವಿ, ಮಂಜುನಾಥ ಖಾರ್ವಿ, ನಾಗ ಖಾರ್ವಿ, ಶೇಖರ ಖಾರ್ವಿ ಯವರ ಕುಟುಂಬಗಳಿಗೆ ರಾಜ್ಯ ಸರ್ಕಾರ ತಲಾ ಆರು ಲಕ್ಷ ಪರಿಹಾರವನ್ನು ಬಿಡುಗಡೆ ಮಾಡಿದ್ದು ಮೀನುಗಾರಿಕಾ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ಕುಟುಂಬಸ್ಥರ ಮನೆಗೆ ಭೇಟಿ ನೀಡಿ ಸ್ವತಃ ಅವರೇ ಪರಿಹಾರ ಮೊತ್ತದ ಆದೇಶ ಪತ್ರವನ್ನು ಹಸ್ತಾಂತರಿಸಿದರು. ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ, ಬೈಂದೂರು ತಾ.ಪಂ.ಅಧ್ಯಕ್ಷ ಮಹೇಂದ್ರ ಪೂಜಾರಿ, ಉಪಾಧ್ಯಕ್ಷೆ ಮಾಲಿನಿ ಕೆ, ಬೈಂದೂರು ಮಂಡಲ ಬಿಜೆಪಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಮೀನುಗಾರರ ಮುಖಂಡರಾದ ಮದನ್ ಕುಮಾರ್, ತಾ.ಪಂ ಸದಸ್ಯ ಕರಣ್ ಪೂಜಾರಿ ಹಾಗೂ ಮೀನುಗಾರರ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 


 

LEAVE A REPLY

Please enter your comment!
Please enter your name here