ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಪಬ್ಬಾಸ್ ಬಳಿ ಬೈಕ್‌ಗೆ ಶಿವಾಜಿಯ ಸ್ಟಿಕ್ಕರ್ ಹಾಕಿದ ನೆಪವೊಡ್ಡಿ ಹಿಂದೂ ಕಾರ್ಯಕರ್ತ ದೀಪಕ್ ಎಂಬವರ ಮೇಲೆ ಹಲ್ಲೆ ಮಾಡಿ ದುಷ್ಜರ್ಮಿಗಳು ಪರಾರಿಯಾದ ಘಟನೆ ನಡೆದಿದೆ.
ದೀಪಕ್ ಗಂಭೀರ ಗಾಯಗೊಂಡು ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ತಂಡವೂಂದು ಬಂದು ದೀಪಕ್ ಅವರಿಗೆ ಹಲ್ಲೆ ನಡೆಸಿ ಪರಾರಿಯಾಗಿದೆ ಎಂದು ತಿಳಿದು ಬಂದಿದೆ.


ಘಟನೆ ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆಸುತ್ತಿದ್ದಾರೆ.ಪೊಲೀಸರು ಕೆಲವರ ವಿಚಾರಣೆ ನಡೆಸುತ್ತಿದ್ದಾರೆ.